ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿ.ಸೆ. ಇಳಿಕೆ ಮತ್ತು 25.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಮಾ. 24ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದ.ಕ. ಜಿಲ್ಲೆಯಲ್ಲಿ 39 ಡಿ.ಸೆ. ಮತ್ತು ಉಡುಪಿ ಜಿಲ್ಲೆಯಲ್ಲಿ 37.4 ಡಿ.ಸೆ. ತಾಪಮಾನ ದಾಖಲಾಗಿತ್ತು.

