Bengaluru 17°C

ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ನೆರವೇರಿದ ರಕ್ಷಾಬಂಧನ ಹಬ್ಬ

School

ಮಂಗಳೂರು: ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮ ಮೆಮೋರಿಯಲ್ ಆಡಿಟೋರಿಯಂ ನಲ್ಲಿ ಆಗಸ್ಟ್ 19ರ ಇಂದು ರಕ್ಷಾಬಂಧನ ಹಬ್ಬದ ಆಚರಣೆ ನಡೆಯಿತು.
1k7a6247


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಉದ್ಯಮಿಗಳು ಹಾಗೂ ಜಿಲ್ಲಾ ಚೆಸ್ ಸಂಘದ ಅದ್ಯಕ್ಷರು ಆಗಿರುವ ಶ್ರೀ ಸುನಿಲ್ ಆಚಾರ್ ಇವರು ದೀಪ ಬೆಳಗಿಸಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಸಿದರು.
1k7a6201


ಬಳಿಕ ಮಾತನಾಡಿದ ಅವರು ರಕ್ಷಾಬಂಧನದ ಮಹತ್ವವನ್ನು ತಿಳಿಸಿ ಅದರ ಪೌರಾಣಿಕ ಹಿನ್ನೆಲೆಯನ್ನು ವಿವರಿಸಿದರು. ಹಾಗೆ ನಮ್ಮ ನಮ್ಮ ರಕ್ಷಣೆಯ ಜೊತೆಗೆ ರಾಷ್ಟ್ರದ ರಕ್ಷಣೆಯನ್ನು ಕೂಡಾ ಮಾಡಬೇಕು, ರಾಷ್ಟ್ರದ ಏಳಿಗೆಗೆ ನಮ್ಮ ಕೊಡುಗೆಯನ್ನು ನೀಡಬೇಕು ಎಂದು ಹೇಳಿದರು.
1k7a6251


ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಶ್ರೀ ರಮೇಶ್ ಕೆ ಅವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರಿ ವೆಂಕಟೇಶ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತಿ ಇದ್ದರು.
1k7a6209


ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾಗಿರುವ ಶ್ರೀಮತಿ ಬಬಿತಾ ಸೂರಜ್ ಹಾಗೂ ಶಕ್ತಿ ವಸತಿ ಶಾಲೆಯ ಶಿಕ್ಷಕಿಯರು ವೇದಿಕೆಯಲ್ಲಿದ್ದ ಗಣ್ಯರಿಗೆ ರಾಖಿ ಕಟ್ಟಿದರು. ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರಸ್ಪರ ರಾಖಿ ಕಟ್ಟಿಸಿಕೊಳ್ಳುವುದರೊಂದಿಗೆ ಈ ರಕ್ಷಾಬಂಧನ ಹಬ್ಬದ ಆಚರಣೆಯಲ್ಲಿ ಭಾಗಿಯಾದರು.
1k7a6263


ಶಾಲೆಯ ಶಿಕ್ಷಕಿ ಪ್ರೇಮಲತಾ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.
1k7a6192


1k7a6222

Nk Channel Final 21 09 2023