ಮಂಗಳೂರು : ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯಲ್ಲಿರುವ ನೇತ್ರಾವತಿ ನದಿ ತಟದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ಬಿದ್ದಿರುವುದನ್ನು ಕಂಡು ಸಾರ್ವಜನಿಕರು ಶಾಕ್ ಆಗಿದ್ದಾರೆ. ಆಧಾರ್ ಕಾರ್ಡ್‌ಗಳ ರಾಶಿ ಕಂಡ ಕೂಡಲೇ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿ ಸಾವಿರಾರು ಆಧಾರ್ ಕಾರ್ಡ್‌ಗಳನ್ನು ಪಂಚಾಯತ್ ಅಧ್ಯಕ್ಷರು ಮತ್ತು ಸಾರ್ವಜನಿಕರು ಸಂಗ್ರಹಿಸಿದರು. ಘಟನೆ ಬಗ್ಗೆ ತೀವ್ರ ಆಕ್ರೋಶವನ್ನು ಸ್ಥಳೀಯ ಶಾಸಕ ಹಾಗೂ ಸ್ಪೀಕರ್ ಯು.ಟಿ. ಖಾದರ್ ಹೊರಹಾಕಿದರು.

ಇಷ್ಟೊಂದು ದೊಡ್ಡ ಪ್ರಮಾಣದ ಆಧಾರ್ ಕಾರ್ಡ್‌ಗಳು ನದಿ ತೀರಕ್ಕೆ ಬಂದಿದ್ದು ಹೇಗೆ ಎಂದು ಸ್ಪೀಕರ್ ಪ್ರಶ್ನೆ ಮಾಡಿದರು. ಆಧಾರ್ ಕಾರ್ಡ್‌ಗಳ ದುರುಪಯೋಗ ಅಥವಾ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಕೃತ್ಯದ ಹಿಂದೆ ಇರುವವರನ್ನು ತಕ್ಷಣ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರ ವೈಯಕ್ತಿಕ ದಾಖಲೆಗಳ ರಕ್ಷಣೆ ವಿಚಾರದಲ್ಲಿ ಅಧಿಕಾರಿಗಳು ವಿಫಲವಾಗಿದ್ದು, ನೇತ್ರಾವತಿ ತಟದಲ್ಲಿ ಪತ್ತೆಯಾದ ಕಾರ್ಡ್‌ಗಳ ಅಸಲಿಯತ್ತು ತಿಳಿಯಲು ಉನ್ನತ ಮಟ್ಟದ ತನಿಖೆಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

