ಮಂಗಳೂರು : ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಸ್ವಾಗತಿಸಲಾಗಿದೆ.
ಈ ಕುರಿತು ಕ್ಷೇತ್ರದ ದೇವಾಲಯ ಕಚೇರಿಯ ವ್ಯವಸ್ಥಾಪಕ ಶ್ರೀ ಪಾರ್ಶ್ವನಾಥ್ ಜೈನ್ ಅವರು ಸೋಮವಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ‘ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ” ಎಂದು ತಿಳಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನ ಮಾಡುತ್ತಿವೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ‘ಈಗ ಆದೇಶಿಸಲಾಗಿರುವ ಮರುತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕು. ತನಿಖೆಯ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಬೇಕು’ ಎಂದು ಅವರು ಆಶಿಸಿದ್ದಾರೆ.

