Bengaluru 25°C
Ad

ಕರಾವಳಿಯಲ್ಲಿ ಭಾರಿ ಮಳೆ : ನಾಳೆ ‘ರೆಡ್‌ ಅಲರ್ಟ್‌’ ಘೋಷಣೆ

ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದ್ದು,ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಂಗಳೂರು: ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದ್ದು,ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.9 ರಂದು ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ.

ಮೀನುಗಾರರು ಕಡಿಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜೂ.10 ಮತ್ತು 11 ರಂದು ‘ಆರೆಂಜ್ ಅಲರ್ಟ್’ ಮತ್ತು ಜೂ.12 ರಂದು ‘ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ

Ad
Ad
Nk Channel Final 21 09 2023
Ad