ಪುತ್ತೂರು: ಪುತ್ತೂರಿನ ಹೊರವಲಯದ ಬನ್ನೂರು ಆನೆಮಜಲು ಪರಿಸರದಲ್ಲಿ ಕ್ರೈಸ್ತ ದಫನ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ನೀಡಿದ ದೂರಿಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬನ್ನೂರು ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಕುರಿತು ಬನ್ನೂರು ಸಂತ ಅಂತೋಣಿ ಚರ್ಚ್‌ ನ ಧರ್ಮಗುರು ಫಾ.ಬಾಲ್ತಿಜಾರ್ ಪಿಂಟೋ ಅವರು ಪೊಲೀಸರಿಗೆ ಜೂ.14 ರಂದು ದೂರು ನೀಡಿದ್ದರು.‌

ದೂರು ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್‌ ನಿರೀಕ್ಷಕರು ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಸದ್ರಿ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳ ಪತ್ತೆಗಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.