ಮಂಗಳೂರು : ಬೀದಿನಾಯಿಗಳ ಹಾವಳಿಯ ಕುರಿತಂತೆ ಪ್ರತಿಕ್ರಿಯಿಸಿದ ಸ್ಪೀಕರ್, ಬೆಂಗಳೂರಿನ ವಿಧಾನಸೌಧದ ಸುತ್ತಲೂ ಇರುವ 53 ಬೀದಿ ನಾಯಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಪ್ರಾಣಿಗಳಿಗೂ ಜೀವಿಸುವ ಹಕ್ಕಿದೆ.

ಹಾಗಾಗಿ ಅಲ್ಲಿನ ಸೂಕ್ತ ಜಾಗದಲ್ಲಿ ಅವುಗಳಿಗೆ ಪುನರ್ವಸತಿ ಕಲ್ಪಿಸಲು ಕೋರಲಾಗಿದೆ. ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಆ ಕ್ರಮಕ್ಕೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿಯೂ ಇಲ್ಲಿನ ಪರಿಸ್ಥಿತಿಗೆ ಪೂರಕವಾಗಿ ನಿಯಮ ಆಗಬೇಕು. ಇದಕ್ಕಾಗಿ ರಾಜ್ಯದಲ್ಲಿ ನೀತಿಯೊಂದನ್ನು ಜಾರಿಗೊಳಿಸುವ ಅಗತ್ಯವಿದೆ. ನಾಯಿ ಸಾಕುವವರು, ಶ್ವಾನ ಪ್ರಿಯರು ಕೂಡಾ ಈ ನಿಟ್ಟಿನಲ್ಲಿ ಸಹಕಾರ ನೀಡುವ ಅಗತ್ಯವಿದೆ ಎಂದು ಹೇಳಿದರು.