Bengaluru 29°C
Ad

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರ ರಕ್ಷಣೆ, ಓರ್ವ ಮಹಿಳೆ ನೀರುಪಾಲು

ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ನೀರುಪಾಲಾಗಿರುವ ಘಟನೆ ಮಂಗಳೂರಿನ ಉಳ್ಳಾಲ ಕಡಲತೀರದಲ್ಲಿ ನಡೆದಿದೆ.

ಮಂಗಳೂರು: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ನೀರುಪಾಲಾಗಿರುವ ಘಟನೆ ಮಂಗಳೂರಿನ ಉಳ್ಳಾಲ ಕಡಲತೀರದಲ್ಲಿ ನಡೆದಿದೆ.

ಪಿ.ಎಲ್ ಪ್ರಸನ್ನ ಎಂಬುವರ ಪತ್ನಿ ಪರಿಮೀ ರತ್ನ ಕುಮಾರಿ (57) ನೀರುಪಾಲಾದವರು. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಗಳು ಎಂದು ತಿಳಿದು ಬಂದಿದೆ. ಪರಿಮೀ ರತ್ನ ಕುಮಾರಿ ಹಾಗೂ ಅವರ ಸ್ನೇಹಿತರು ಪ್ರವಾಸಕ್ಕೆಂದು ಆಂಧ್ರಪ್ರದೇಶದಿಂದ ಬಂದಿದ್ದರು. ಸಮುದ್ರಕ್ಕಿಳಿದಾಗ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದಾಗ ನಾಲ್ವರು ಮಹಿಳೆಯರನ್ನು ಎಳೆದುಹೋಗಿದೆ.

ಕೂಡಲೇ ಎಚ್ಚೆತ್ತ ಸ್ಥಳೀಯರು ಕೊಚ್ಚಿ ಹೋಗುತ್ತಿದ್ದವರನ್ನು ತಕ್ಷಣ ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

 

Ad
Ad
Nk Channel Final 21 09 2023
Ad