ಮಂಗಳೂರು: ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ ಹಿನ್ನಲೆ ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಸಮಿತಿ ಸುದ್ದಿಗೋಷ್ಠಿ ನಡೆಸಿದರು.
ಮಂಗಳೂರಿನ ಬಾರೆಬೈಲ್ ನಲ್ಲಿರುವ ದೈವಸ್ಥಾನದಲ್ಲಿ ಕಳೆದ ವರ್ಷವೂ ರಿಷಬ್ ಶೆಟ್ಟಿ ಕುಟುಂಬ ನೇಮೋತ್ಸವ ಸೇವೆ ಕೊಟ್ಟಿದ್ದರು. ಮಗನ ಹುಟ್ಟು ಹಬ್ಬದ ಹಿನ್ನಲೆ ಸೇವೆಯನ್ನು ಕೊಟ್ಟಿದ್ದರು. ಎಲ್ಲಿಯೂ ನಡೆಯದ ಚಮತ್ಕಾರ ಈ ಕ್ಷೇತ್ರದಲ್ಲಿ ಆಗಿದೆ ಎಂದು ರಿಷಬ್ ಹೇಳಿಕೊಂಡಿದ್ದರು.

ದೀಪಾವಳಿ ಸಂದರ್ಭದಲ್ಲಿ ದೈವದ ಅನುಮತಿ ಕೇಳಿ ಹರಕೆ ನೇಮಕ್ಕೆ ಒಪ್ಪಿಗೆ ಪಡೆಯಲಾಯಿತು. ಪಂಜುರ್ಲಿ ನೇಮ, ಜಾರಾಂದಾಯಗೆ ತುಡರ ಬಲಿ ನೀಡಲು ದೈವ ಒಪ್ಪಿಗೆ ನೀಡಿತು. ಸೇವೆಯನ್ನು ದೈವಗಳು ಒಳ್ಳೆಯ ರೀತಿ ಸ್ವೀಕಾರ ಮಾಡಿದೆ. ಈ ಕ್ಷೇತ್ರ ಬೆಳಗಬಾರದು ಅಂತಾ ಈಗ ವಿವಾದ ಹುಟ್ಟುಹಾಕಿದ್ದಾರೆ.

ನಮಗೆ ದೈವ ನರ್ತಕರ ಮೇಲೆ ಯಾವುದೇ ಸಂಶಯ ಇಲ್ಲ. ಭಾವನೆಗಳ ಮೇಲೆ ಆರಾಧನೆಯನ್ನು ಮಾಡುತ್ತಿದ್ದೇವೆ. ದೈವಸ್ಥಾನದ ಕಟ್ಟುಕಟ್ಟಳೆ ಪ್ರಕಾರ ನಾವು ನಡೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ಚರ್ಚೆಗಳು ನಡೆಯುತ್ತಿದೆ. ಎಣ್ಣೆಬೂಳ್ಯ ಸಂದರ್ಭದಲ್ಲಿ ದೈವವೇ ನರ್ತನ ಮಾಡುತ್ತದೆ ಎಂಬ ನಂಬಿಕೆ. ನಮ್ಮ ದೈವ ಅಪವಾದದಿಂದ ಮುಕ್ತ ಇದೆ ಅಂತಾ ಹೇಳಿ ಸ್ಪಷ್ಟೀಕರಣ ನೀಡುತ್ತೇವೆ. ದೈವಸ್ಥಾನದ ಆಡಳಿತ ಮಂಡಳಿ ಪ್ರಮುಖರಾದ ರವಿಪ್ರಸನ್ನ ಸುದ್ದಿಗೋಷ್ಠಿಯಲ್ಲಿ ಹೇಳಿದರು.

