Ad

ಪಿಡಬ್ಲ್ಯುಡಿ ಗುತ್ತಿಗೆದಾರನ‌ ಮನೆಗೆ ನುಗ್ಗಿದ ದರೋಡೆಕೋರರು: ನಗದು ಲೂಟಿ, ಚೂರಿ ಇರಿತ

ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ದರೋಡೆ ನಡೆದ ಘಟನೆ ಶುಕ್ರವಾರ ರಾತ್ರಿ ವೇಳೆಗೆ ನಡೆದಿದೆ.

ಮಂಗಳೂರು : ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆಯಲ್ಲಿ ದರೋಡೆ ನಡೆದ ಘಟನೆ ಶುಕ್ರವಾರ ರಾತ್ರಿ ವೇಳೆಗೆ ನಡೆದಿದೆ.

Ad
300x250 2

ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ದರೋಡೆಗೈದಿದೆ. ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ.

Untitled Design (10)

ಬಳಿಕ ಮನೆಯಲ್ಲಿದ್ದವರನ್ನು ಬೆಡ್ ಶೀಟ್ ಬಳಸಿ ಕೈಕಾಲುಗಳನ್ನು ಕಟ್ಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮನೆಯ ಒಳಗೆಲ್ಲ ತಡಕಾಡಿ ಸಿಕ್ಕಿದ ನಗದು ಮತ್ತು ಒಡವೆಗಳನ್ನು ದೋಚಿದ್ದಾರೆ. ಬಳಿಕ ಮನೆ ಮಾಲೀಕನ ವಾಹನವನ್ನು ಕದ್ದುಕೊಂಡು ತೆರಳಿದ್ದು ಮನೆಯಿಂದ ಅನತಿ ದೂರದಲ್ಲಿ ಬಿಟ್ಟು ಹೋಗಿದ್ದಾರೆ. ಈ ವೇಳೆ ಪದ್ಮನಾಬ್ ಅವರ ಕೈಗೆ ಚೂರಿಯಿಂದ ಇರಿಯಲಾಗಿದೆ.

ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಆರೋಪಿಗಳ ಗುರುತು ಪತ್ತೆ ಹಚ್ಚಲು ಮತ್ತು ಅವರನ್ನು ಶೀಘ್ರವಾಗಿ ಬಂಧಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Ad
Ad
Nk Channel Final 21 09 2023
Ad