ಮಂಗಳೂರು : ಎಸ್‍ಐಆರ್ ಕುರಿತು ಸುಳ್ಳು ಮಾಹಿತಿ ನೀಡಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ನೋಡುತ್ತಿರುವ ಕಾಂಗ್ರೆಸ್ಸಿನ ಷಡ್ಯಂತ್ರದ ವಿರುದ್ಧ, ಯುವ ಸಮುದಾಯಕ್ಕೆ ಹಾಗೂ ಜನರಿಗೆ ಸರಿಯಾದ ಮಾಹಿತಿ ನೀಡಿ ದೇಶ ವಿರೋಧಿಗಳ ಸಂಚನ್ನು ಬಯಲು ಮಾಡುವ ಉದ್ದೇಶದಿಂದ ನ.6 ಶುಕ್ರವಾರದಂದು ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಭಾಗ ಮಟ್ಟದ ‘ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಅಭಿಯಾನ ನಡೆಯಲಿದೆ.

ಮಂಗಳೂರು ಹಾಗೂ ಉಡುಪಿ ಜಿಲ್ಲೆಯಿಂದ ಒಟ್ಟು ಇಪ್ಪತ್ತು ಸಾವಿರಕ್ಕೂ ಜನ ಆಗಮಿಸಲಿದ್ದು, ಮಂಗಳೂರು ನಗರ ದಕ್ಷಿಣದಿಂದಲೇ ಐದು ಸಾವಿರ ಜನ ಬರಲಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮಾಹಿತಿ ನೀಡಿದ್ದಾರೆ.