Bengaluru 23°C
Ad

ಭಾರೀ ಮಳೆ ಹಿನ್ನಲೆ: ನಾಳೆಯೂ ದ.ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Raje

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ನಾಳೆಯೂ ಮಳೆಯ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದು, ಹವಾಮಾನ ಇಲಾಖೆಯಿಂದ ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿರೋದಾಗಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad