ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಂದಿರಾ ನಗರ ನಿವಾಸಿ ಗಣೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟವರು. ಇವರು ಹೋಳಿಗೆ ವ್ಯಾಪಾರ ಮಾಡುತ್ತಿದ್ದು, ಪ್ರತಿ ಅಂಗಡಿ, ಮನೆಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದರು. ಎಲ್ಲರಿಗೂ ಚಿರಪರಿಚಿತರಾಗಿದ್ದರು.
ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ವಿರುದ್ಧ ಧಿಕ್ಕಿಗೆ ಹೋಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಆಕ್ಟಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯಗೊಂಡಿದ್ದರು. ಕಾರು ಚಾಲಕನ ಅಜಾಗರೂಕತೆಗೆ ಆಕ್ರೋಶ ವ್ಯಕ್ತವಾಗಿದೆ. ಮೃತರು ಪತ್ನಿ, 1 ಗಂಡು ಹಾಗೂ ಹೆಣ್ಣು ಮಗಳನ್ನು ಅಗಲಿದ್ದಾರೆ.
Ad