ಮಂಗಳೂರು: ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಹಳ ಸಮಯದಿಂದ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಅಂದುಕೊಂಡಿದ್ದೆ.ಇಂದು ಕೊರಗಜ್ಜ ದೈವವು ನನ್ನನ್ನು ಇಲ್ಲಿಗೆ ಕರೆಸಿದ್ದು ಬಹಳ ಭಕ್ತಿಯಿಂದ ಬಂದಿದ್ದೇನೆ. ದೇಶವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡುವಂತೆ ದೈವದ ಬಳಿ ಪ್ರಾರ್ಥಿಸಿದ್ದೇನೆಂದರು.
ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಸಚಿವರು ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಬಿಹಾರದ ಜನ ತಮ್ಮ ಅಮೂಲ್ಯವಾದ ಮತಗಳಿಂದ ನಮ್ಮನ್ನು ಆಶೀರ್ವಾದ ಮಾಡಿದ್ದಾರೆ.ಇದರಿಂದ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರು ಪ್ರಪಂಚದಾದ್ಯಂತ ಬಿತ್ತರಿಸುತ್ತಿದ್ದ ಸುಳ್ಳಿಗೆ ದೊಡ್ಡಮಟ್ಟದ ಸೋಲಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಪೂಜಾ ಪೈ,ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಜಿ.ಪಂ ಮಾಜಿ ಸದಸ್ಯೆ ಧನಲಕ್ಷ್ಮಿ ಗಟ್ಟಿ,ಬಿಜೆಪಿ ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್, ಉಪಾಧ್ಯಕ್ಷರಾದ ರವಿಶಂಕರ ಸೋಮೇಶ್ವರ, ಸುಮನ ಹರೀಶ್ ಶೆಟ್ಟಿ,ಕಾರ್ಯದರ್ಶಿ ಕಿಶೋರ್,
ಕೋಶಾಧಿಕಾರಿ ಸುಮಲತಾ ಕೊಣಾಜೆ, ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಮುರಳೀಧರ್ ಕೊಣಾಜೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಧವಿ ಉಳ್ಳಾಲ್, ಮಾಜಿ ಮಂಡಲ ಕಾರ್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್, ಮಂಡಲ ಕಾರ್ಯದರ್ಶಿ ಸುರೇಖಾ,ಪ್ರಮುಖರಾದ ಕಿಶೋರ್, ರಮೇಶ್ ಬೆದ್ರೋಳಿಕೆ, ಪುರುಷೋತ್ತಮ್ ಗಟ್ಟಿ ಪರ್ಯತ್ತೂರು ಮೊದಲಾದವರು ಉಪಸ್ಥಿತರಿದ್ದರು.

