ಮಂಗಳೂರು : ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ದಿನಾಂಕ29-09-2024ರಂದು
ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ ಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ೨ ಚಿನ್ನದ
ಪದಕಗಳನ್ನು ಪಡೆದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ಈಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾಯಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾಯಕ್, ಪ್ರಧಾನ ಸಲಹೆಗಾರರಾದ ಶ್ರೀ
ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಶುಭಹಾರೈಸಿದರು.
Ad