ಮಂಗಳೂರು : ಡಿ.ಕೆ.ಶಿವಕುಮಾ‌ರ್ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಇವರಿಬ್ಬರೂ ಜನಸಾಮಾನ್ಯರ ಜೊತೆ ಒಡನಾಟ ಇರಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.

ರಾಜಕೀಯದಲ್ಲಿ ಅವಕಾಶಕ್ಕಾಗಿ ಎಲ್ಲರಿಗೂ ಆಸೆ ಇರುತ್ತದೆ. ರಾಜಣ್ಣ ಅವರಾಗಲಿ, ಸತೀಶ್ ಜಾರಕಿಹೊಳೆಯವರಾಗಲಿ ಸಿಎಂ ಬದಲಾವಣೆ ಎಂಬ ಹೇಳಿಕೆ ನೀಡಿಲ್ಲ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಾ ಐದು ವರ್ಷಗಳ ಕಾಲ ನಾನು ಮುಖ್ಯಮಂತ್ರಿಯಾಗಿರಲಿದ್ದೇನೆ.

ಆದರೆ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ. ಹಾಗಾಗಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಎಂ.ಸಿ. ವೇಣುಗೋಪಾಲ್ ಉತ್ತರಿಸಿದರು.