ಮಂಗಳೂರು: ಪಡೀಲ್ ನಲ್ಲಿ ನಿರ್ಮಾಣವಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 16 ರಂದು ಉದ್ಘಾಟಿಸಲಿದ್ದು, ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ , ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಪರಿಶೀಲನೆ ನಡೆಸಿದರು.