ಪುತ್ತೂರು:   “ಸಾವಿರ ವರ್ಷಗಳ ಹೋರಾಟದ ಬಳಿಕವೂ ತನ್ನತನವನ್ನು ಉಳಿಸಿಕೊಂಡ ಏಕೈಕ ದೇಶವೆಂದರೆ ಭಾರತ. ಈ ಜಗತ್ತಿನಲ್ಲಿ ಹೊನ್ನಿಗಾಗಿ, ಹೆಣ್ಣಿಗಾಗಿ, ಅಧಿಕಾರಕ್ಕಾಗಿ ಯುದ್ಧಗಳು ನಡೆದಿದೆ. ಆದರೆ ತನ್ನ ಸಂಸ್ಕೃತಿ, ತನ್ನ ಸಭ್ಯತೆಯ ಉಳಿವಿಗಾಗಿ ಒಂದು ಸಾವಿರ ವರ್ಷಗಳ ನಿರಂತರ ಯುದ್ಧವೇನಾದರೂ ನಡೆದಿದ್ದರೆ, ಅದು ಈ ಪುಣ್ಯಭೂಮಿ ಭಾರತದಲ್ಲಿ ಮಾತ್ರ” ಎಂದು ಖ್ಯಾತ ವಾಗ್ಮಿಗಳಾದ ಶ್ರೀಕಾಂತ್‌ಶೆಟ್ಟಿ ಅವರು ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ 25 ನೇ ಕಾರ್ಗಿಲ್‌ ವಿಜಯೋತ್ಸವದ ಅಂಗವಾಗಿ ನಡೆದ ʼಕಾರ್ಗಿಲ್‌ವಿಜಯ – ಯೋಧ ನಮನʼ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. “ಈ ದೇಶ ಇಂದು ಪ್ರಜಾಸತ್ತಾತ್ಮಕ ದೇಶವಾಗಿ ಉಳಿದಿದೆ ಎಂದಾದರೆ ಅದಕ್ಕೆ ಹಿಂದು ಬಹುಸಂಖ್ಯಾತವಾಗಿರುವಂತಹ ನಮ್ಮ ಸಾಂಸ್ಕೃತಿಕ ಬುನಾದಿಯೇ ಕಾರಣ ಎಂದರು.

ದೇಶ ಎಂದರೆ ನಮ್ಮ ಸಂಸ್ಕೃತಿ, ನಮ್ಮ ಪರಂಪರೆ. ದೇಶಕ್ಕೆ ಅಪಾಯ ಒದಗಿದಾಗಲೆಲ್ಲಾ ಜಾತಿ, ನೀತಿ, ಮತ, ಪಂಥವನ್ನು ಬಿಟ್ಟು ಈ ದೇಶ ಒಂದಾಗಿದೆ. ಒಬ್ಬೊಬ್ಬ ಯೋಧನ ರಾಷ್ಟ್ರ ಪ್ರೇಮ ಹಾಗೂ ಈ ನೆಲದ ಋಣಭಾವದಿಂದಲೇ ಇಂದು ದೇಶ ಸುಭದ್ರವಾಗಿದೆ. ಈ ದೇಶವನ್ನು ಅಖಂಡ ಭಾರತವನ್ನಾಗಿ ಮಾಡಬೇಕು ಎನ್ನುವ ಹಂಬಲಕ್ಕೆ ಕಾರ್ಗಿಲ್ ವಿಜಯ ಸಂಭ್ರಮಾಚರಣೆ ಬುನಾದಿಯಾಗಬೇಕಾಗಿದೆ ಎಂದು ಎಲ್ಲರನ್ನು ಹುರಿತುಂಬಿಸಿದರು.

ನಮ್ಮ ಪೂರ್ವಜರು ಮಾಡಿದಂತಹ ತ್ಯಾಗ, ಬಲಿದಾನಗಳು ನಮ್ಮ ಮಕ್ಕಳಿಗೆ ಪ್ರೇರಣೆಯನ್ನು ನೀಡಲಿ. ಭಾರತವನ್ನು ವಿಶ್ವಗುರುವನ್ನಾಗಿ ಅಲಂಕರಿಸಲು ಬೇಕಾದ ಕೆಲಸ ಕಾರ್ಯಗಳು ನಮ್ಮಿಂದ ಸಾಧ್ಯವಾಗಲಿ” ಎಂದು ಅವರು ಈ ಸಂದರ್ಭದಲ್ಲಿ ಆಶಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಅಭ್ಯಾಗತರಾಗಿ ಮರಣೋತ್ತರ ಶೌರ್ಯ ಚಕ್ರ ಪುರಸ್ಕೃತ ಯೋಧ ಕ್ಯಾಪ್ಟನ್‌ ಎಂ. ವಿ. ಪ್ರಾಂಜಲ್‌ ಪೋಷಕರಾದ ಶ್ರೀ ಎಂ.
ವೆಂಕಟೇಶ್‌ ಹಾಗೂ ಶ್ರೀಮತಿ ಅನುರಾಧಾ ವೆಂಕಟೇಶ್‌ ಅವರು ಪಾಲ್ಗೊಂ