ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ.

ನಿಖಿತಾ (19) ಮೃತ ವಿದ್ಯಾರ್ಥಿನಿ. ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಈಕೆ ಮತ್ತು ತಾಯಿ ಇಬ್ಬರೇ ಮನೆಯಲ್ಲಿದ್ದು, ತಾಯಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಒಬ್ಬಳೇ ಇದ್ದ ನಿಖಿತಾ ನೇಣಿಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

View this post on Instagram

A post shared by News Karnataka (@newskarnataka)