ಮಂಗಳೂರು: ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಮ್ ಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಫೆ.18 ರಂದು ತಡೆದು ಪರಿಶೀಲಿಸಿ ಆರೋಪಿಗಳಾದ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30) ಕೋಝಿಕೋಡ್, ಕೇರಳ, ಇಸ್ಮಾಯಿಲ್ (28) ವಯನಾಡ್ ಜಿಲ್ಲೆ, ಕೇರಳ , ಸಂಶೀರ್ (27)ಕೊಝಿಕೋಡ್, ಕೇರಳ. ಎಂಬವರುಗಳು ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ.

ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್‍ಗಳು ಹಾಗೂ ನಗದು ರೂ. 10,000/- ವಶಪಡಿಸಿಕೊಂಡು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಸದ್ರಿ ಆರೋಪಿಗಳು ಕೇರಳ, ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿ, ತಲೆಮರೆಸಿಕೊಂಡಿರುವುದಾಗಿದೆ. ಅಲ್ಲದೆ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿಯಾಗಿರುತ್ತಾನೆ. ಅಜ್ಮಲ್ ಸಹಚರನಾದ ಇಸ್ಮಾಯಿಲ್‌ನ ಮೇಲೆ ಕೂಡ ಕೇರಳ ರಾಜ್ಯದ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿದೆ
ಸದ್ರಿ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಸುನಿಲ್ ಕುಮಾರ್, ದ.ಕ ಜಿಲ್ಲಾ ಡಿ.ಎಸ್.ಬಿ ವಿಭಾಗದ ಪೊಲೀಸ್ ನಿರೀಕ್ಷಕರಾದ ನಂದ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್ ರೈ, ಪ್ರಶಾಂತ್ ಎಂ, ಪ್ರವೀಣ್ ರೈ, ಹರ್ಷಿತ್, ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂಧಿಗಳಾದ ಪರಮೇಶ್ವರ ಗೌಡ, ಹರೀಶ್, ಸುಬ್ರಹ್ಮಣ್ಯ, ಬೀಮಸೇನ್, ಭವಿತ್ ರೈ, ನಾಗಾರಾಜ್, ಕಾರ್ತಿಕ್ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್, ಸಂಪತ್ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಿಸಿರುತ್ತಾರೆ.

