Ad

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಅಧಿಕಾರ ಸ್ವೀಕಾರ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ಹಿರಿಯ ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಖ್ಯಾತ ಹಿರಿಯ ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕರಿಸಿದರು. ಜೂನ್ 13, ಗುರುವಾರದಂದು ಉರ್ವಸ್ಟೋರ್ಸ್‌ನಲ್ಲಿರುವ ತುಳು ಭವನದಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Ad
300x250 2

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಾಮನ ನಂದಾವರ, ಬಹಳ ಸಮಯದ ಬಳಿಕ ತುಳು ಅಕಾಡೆಮಿಯ ಚಾವಡಿಯಲ್ಲಿ ಬೆಳಕು ಕಂಡಿತು ಎಂದು ಬಣ್ಣಿಸಿದರು. ಜತೆಗೆ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸಲಹೆ ನೀಡಿದರು.

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು ಎಚ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಳ್ವಾರೆಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ರಾಜೇಶ್ ಜಿ ಮತ್ತಿತರರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad