ನಿಟ್ಟೆ: “ಜೀವನದಲ್ಲಿ ಮನುಷ್ಯ ತನ್ನ ವೈಫಲ್ಯಗಳಿಂದ ಪಾಠಗಳನ್ನು ಕಲಿಯಬೇಕು. ಸವಾಲುಗಳನ್ನು ಸ್ವೀಕರಿಸುವ ಮೂಲಕ ಕನಸುಗಳನ್ನು ನನಸು ಮಾಡಬಹುದು” ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ 2001-2005ನೇ ಸಾಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಹಳೆವಿದ್ಯಾರ್ಥಿ ಹಾಗೂ ಪ್ರಸ್ತುತ ಯುನಿಕೋರ್ಟ್ ಸಂಸ್ಥೆಯ ಸಂಸ್ಥಾಪಕ ಹಾಗೂ ಚೀಫ್ ಟೆಕ್ನಾಲಜಿ ಆಫೀಸರ್ ಪ್ರಶಾಂತ್ ಶೆಣೈ ಕಟಪಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸೆಪ್ಟೆಂಬರ್ 16 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನ ಹಾಗೂ ಇಂಜಿನಿಯರ್ಸ್ ದಿನಾಚರಣೆಯಲ್ಲಿ ಭಾಗವಹಿಸಿ ಇಂಜಿನಿಯರ್ಸ್ ದಿನದ ಪ್ರಯುಕ್ತ ಸನ್ಮಾನವನ್ನು ಸ್ವೀಕರಿಸಿ ‘ಈ ಗೌರವವು ತಮ್ಮ ಜೀವನದಲ್ಲಿ ಸ್ಮರಣೀಯವಾಗಿದ್ದು, ತಮ್ಮ ಕಾಲೇಜಿನ ನೆನಪುಗಳು ಹತ್ತು ಹಿರಿದಾದವು’ ಎಂದು ಸ್ಮರಿಸಿದರು. “ನಾವು ಬಯಸಿದ ಆ ಕನಸುಗಳತ್ತ ಓಡಬೇಕಾಗಿದೆ, ಆದರೆ ಅದಕ್ಕಾಗಿ ಕಷ್ಟಪಟ್ಟು ಶ್ರಮಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕುಲಸಚಿವ ಡಾ.ಹರ್ಷಾ ಹಾಲಹಳ್ಳಿ ಅವರು ಸನ್ಮಾನ ಸ್ವೀಕರಿಸಿದ ಶಿಕ್ಷಕರನ್ನು ಹಾಗೂ ಇಂಜಿನಿಯರ್ ನ್ನು ಶ್ಲಾಘಿಸಿ ನಿಮ್ಮ ಮೇಲಿನ ಜವಾಬ್ದಾರಿ ಇನ್ನೂ ಹೆಚ್ಚಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ. ಗೋಪಾಲ ಮುಗೇರಾಯ ಅವರು, ಉತ್ತಮ ಇಂಜಿನಿಯರ್ ಗಳು ಸಮಾಜಕ್ಕೆ ಕೊಡುಗೆ ನೀಡಲು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.
2023-24ನೇ ಸಾಲಿನಲ್ಲಿ ಪಿಎಚ್.ಡಿ ಪದವಿಯನ್ನು ಗಳಿಸಿದ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ವಿಎಲ್‌ಎಸ್‌ಐ ಡಿಸೈನ್ & ಟೆಕ್ನಾಲಜಿ) ವಿಭಾಗದ ಡಾ. ಸುಷ್ಮಾ ಪಿ ಎಸ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಡಾ. ಕೀರ್ತನಾ ಬಿ ಸಿ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗ ಡಾ. ಮೆಲ್ವಿನ್ ರಾಜೇಶ್ ಕಾಸ್ಟೆಲಿನೋ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಡಾ. ಚರಿಷ್ಮಾ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಡಾ. ಅಸ್ಮಿತಾ ಪೂಜಾರಿ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಡಾ. ಸತೀಶ್ ರಾವ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಡಾ. ದಿನೇಶ್ ಶೆಟ್ಟಿ, ರೋಬೋಟಿಕ್ಸ್ & ಕೃತಕ ಬುದ್ಧಿವಂತಿಕೆ ಇಂಜಿನಿಯರಿಂಗ್ ವಿಭಾಗ ಡಾ. ಪ್ರಸಾದ್ ಪ್ರಭು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಡಾ. ಶುಭಾ ಬಿ, ಇನ್‌ಫರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಡಾ. ದೀಪಾ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ. ಮಂಜುನಾಥ ಎಮ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗ (ವಿಎಲ್‌ಎಸ್‌ಐ ಡಿಸೈನ್ & ಟೆಕ್ನಾಲಜಿ)ಯ ಡಾ. ನಿಶಾಂತ್ ಎ, ಇನ್‌ಫರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಡಾ. ಸಂತೋಷ್ ಎಸ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಡಾ. ನಂದಿನಿ ಕೆ ಕೆ, ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ. ಪ್ರಶಾಂತ್ ಕುಮಾರ್ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದರು.
ನಿಟ್ಟೆ ವಿ ವಿ ಅಂತರರಾಷ್ಟ್ರೀಯ ಸಂಪರ್ಕ ವಿಭಾಗದ ನಿರ್ದೇಶಕ ಪ್ರೊ. ಹರಿಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲ ಹಾಗೂ ಪರೀಕ್ಷಾ ಮುಖ್ಯಸ್ಥ ಡಾ| ಶ್ರೀನಿವಾಸ ರಾವ್ ಬಿ.ಆರ್ ಸನ್ಮಾನಿತ ಶಿಕ್ಷಕರನ್ನು ಪರಿಚಯಿಸಿದರು. ಉಪಪ್ರಾಂಶುಪಾಲ ಹಾಗೂ ಡೀನ್ (ಎಕಾಡೆಮಿಕ್ಸ್) ಡಾ| ಐ ಆರ್ ಮಿತ್ತಂತಾಯ ವಂದಿಸಿದರು. ಡಾ| ನರಸಿಂಹ ಬೈಲ್ಕೇರಿ, ಡೀನ್ ಸ್ಟೂಡೆಂಟ್ ವೆಲ್ಫೇರ್ ಕಾರ್ಯಕ್ರಮ ಸಂಯೋಜಿಸಿದರು. ಆರ್ಟಿಫಿಶಿಯಲ್ ಇಂಟಲಿಜೆನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಪೈ ಕಾರ್ಯಕ್ರಮ ನಿರೂಪಿಸಿದರು.