ಮಂಗಳೂರು : ಮನ್ಕುತೋಟಗುತ್ತು ಹಾಗೂ ನಾಡಾಜೆಗುತ್ತು ಇವರ ಸ್ಮರಣಾರ್ಥ ನಗರದ ಜಪ್ಪಿನಮೊಗರುವಿನಲ್ಲಿ16ನೇ ವರ್ಷದ ಹೊನಲು ಬೆಳಕಿನ ಜಯ- ವಿಜಯ ಜೋಡುಕೆರೆ ಕಂಬಳವು ಫೆ.14 ಮತ್ತು 15ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.
ಅವರು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 16ನೇ ವರ್ಷದ ಈ ಕಂಬಳವನ್ನು ಫೆ.14ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಅನಂತಪದ್ಮನಾಙ ಅಸ್ರಣ್ಣರ ಆರ್ಶೀವಚನದೊಂದಿಗೆ ವೇದ ಮೂರ್ತಿ ಬ್ರಹ್ಮ ಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟಿಸುವರು.
ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ಅಧ್ಯಕ್ಷತೆ ವಹಿಸುವರು. ಸಂಜೆ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಸಭಾಧ್ಯಕ್ಷ ಯು. ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವಾರು ಮಂದಿ ಜನಪ್ರತಿನಿಧಿಗಳು ಹಾಗೂ ನಟರು ಮತ್ತು ನಟಿಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಲ 150ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ವಿಜೇತ ಕೋಣಗಳಿಗೆ ಚಿನ್ನದ ಪದಕದ ಜೊತೆಗೆ ಶಾಶ್ವತ ಫಲಕವನ್ನೂ ನೀಡಲಾಗುತ್ತದೆ ಎಂದು ಹೇಳಿದರು.
ಸಮಿತಿಯ ಗೌರವ ಸಲಹೆಗಾರ ಜಪ್ಪುಗುಡ್ಡೆ ಗುತ್ತು ಭುಜಂಗೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಮನ್ಕುತೋಟಗುತ್ತು ಅನಿಲ್ ಜೆ. ಶೆಟ್ಟಿ ಮಾತನಾಡಿ, ಕಂಬಳದಲ್ಲಿ ಸಮಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಜೋಡುಕೆರೆ ಕಂಬಳ ಮತ್ತು ತಿರುವೈಲು ಕಂಬಳವು ಸಮಯ ನಿಗದಿಯನ್ನ ಪಾಲನೆ ಮಾಡುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೆಲವೊಂದು ಕಂಬಳದಲ್ಲಿ ಸಮಯ ಕ್ಕೆ ಆದ್ಯತೆಯ ನೀಡುವ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಈ ವೇಳೆ ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ವೀಣಾಮಂಗಳ, ಪ್ರವೀಣಚಂದ್ರ ಆಳ್ವ ತಿರುವೈಲ್ ಗುತ್ತು, ಶಕೀನ್ ಶೆಟ್ಟಿ, ಸಂದೀಪ್ ಶೆಟ್ಟಿ,ನಿಶಾನ್ ಪೂಜಾರಿ, ಗೌರವ ಸಲಹೆಗಾರರಾದ ಭುಜಂಗ ಶೆಟ್ಟಿ,ಪ್ರಚಾರ ಸಮಿತಿ ಸಂಚಾಲಕ ಜೆ.ನಾಗೇಂದ್ರ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

