Ad

ಕಾರು ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿ: ಚಾಲಕ ಮೃತ್ಯು

ಕಾರು ರಸ್ತೆ ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ನಸುಕಿನ ಜಾವ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾರೆ.

ಮಂಗಳೂರು: ಕಾರು ರಸ್ತೆ ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ನಸುಕಿನ ಜಾವ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾರೆ.

Ad
300x250 2

ಉಜಿರೆ ನಿವಾಸಿ ಪ್ರಜ್ವಲ್ ನಾಯಕ್​ ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಐಷಾರಾಮಿ ಬೆಂಜ್ ಕಾರು ನಜ್ಜುಗುಜ್ಜಾಗಿದೆ. ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad