ಮಂಗಳೂರು: ಬೇರೆ ಜಿಲ್ಲೆಗಳಲ್ಲಿ ಇಲ್ಲದ ಕಾನೂನನ್ನು ಇಲ್ಲಿ ಹೇರಲಾಗುತ್ತಿದೆ. ಕಾನೂನು ನೆಪದಲ್ಲಿ ಕರಾವಳಿಯ ಸಾಂಸ್ಕೃತಿಕ ಅಂಗಡಿಯನ್ನೇ ಬಂದ್ ಮಾಡಲಾಗುತ್ತಿದೆ. ಶೇ.80ರಷ್ಟು ಕಲಾವಿದರು ಕಲೆಯನ್ನೇ ಬದುಕಿಗೆ ನಂಬಿಕೊಂಡಿದ್ದಾರೆ.

ರಾತ್ರಿ ನಾಟಕ ಮಾಡಬಾರದು ಎಂದು ಅರ್ಧಕ್ಕೆ ನಿಲ್ಲಿಸುವ ಸ್ಥಿತಿಯಾಗಿದೆ. ಇದರಿಂದ ಜನರ ಹೊಟ್ಟೆಗೆ ಬಡಿದಂತಾಗಿದೆ ಎಂದುವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಹಲವು ಸಂಘಟನೆಗಳ ವತಿಯಿಂದ ಸುದ್ದಿಗೋಷ್ಟಿ ನಡೆಸಿದ್ದು  ದೇವದಾಸ್ ಕಾಪಿಕಾಡ್ ಹೇಳಿದರು.