ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸೇವಾದರ ಏರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಟ್ಯಾಗ್ ಮಾಡಿ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಈ ಸೇವಾದರ ಏರಿಕೆಗೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ.
ಆಡಳಿತ ಮಂಡಳಿ 14 ವರ್ಷಗಳ ಬಳಿಕ ಹೆಚ್ಚಳ ಮಾಡಿರುವುದಾಗಿ ಹೇಳಿದೆ. ಮತಗಳ್ಳತನದ ಕಾಂಗ್ರೆಸ್ ಅಭಿಯಾನದ ಬಗ್ಗೆಯೂ ಸ್ವಾಯತ್ತ 1. ಸಂಸ್ಥೆಯಾದ ಚುನಾವಣಾ ಆಯೋಗ ಕಾಂಗ್ರೆಸ್‌ನಿಂದ ದಾಖಲೆ ಕೇಳುತ್ತದೆ.
ಆದರೆ ಬಿಜೆಪಿಯ ಜನಪ್ರತಿನಿಧಿಯೇ ಈ ಬಗ್ಗೆ ಆರೋಪ ಮಾಡಿರುವಾಗ ಅವರಿಂದ ದಾಖಲೆ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧೀನದಲ್ಲಿರಿಸಿ ಆಡಳಿತ ನಡೆಸುವ ಬಿಜೆಪಿಯ ಕುರಿತಂತೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಅಪ್ರಚಾಚರಗಳ ಬಗ್ಗೆ ಗಮನ ಹರಿಸಬೇಕು. ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಬೇಕು ಎಂದು ಮಂಜುನಾಥ್ ಭಂಡಾರಿ ಹೇಳಿದರು.

