ಮಂಗಳೂರು: ಸ್ಥಳೀಯಾಡಳಿತ ಚುನಾವಣೆ ನಡೆಸುವ ವಿಚಾರವಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆ‌ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು.

ಸ್ಥಳೀಯಾಡಳಿತ ಚುನಾವಣೆ ನಡೆಸುವ ಬಗ್ಗೆ ಈಗಾಗಲೇ ಪ್ರಕ್ರಿಯೆಗಳು ಆರಂಭವಾಗಿದೆ. ಹೈಕೋರ್ಟ್ ಆದೇಶದ ಪ್ರಕಾರ ಜೂನ್ ಮೊದಲು ಚುನಾವಣೆ ನಡೆಸಬೇಕು. ಈಗಾಗಲೇ ಅದರ ಬಗ್ಗೆ ತಯಾರಿಗಳು ಆರಂಭವಾಗಿದೆ. ಚುನಾವಣೆ ನಡೆಸಲು ಕಾಲಾವಕಾಶ ಕೇಳಿದ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.

ಚುನಾವಣೆ ನಡೆದೆ ನಡೆಯುತ್ತೆ. ಸೆಪ್ಟೆಂಬರ್ ನಲ್ಲಿ ನಡೆಸಲು ಹೈಕೋರ್ಟ್ ಕಾಲಾವಕಾಶ ಕೊಟ್ರೆ ಮಾಡ್ತೇವೆ. ಜೂನ್ ಒಳಗೆ ಮಾಡಬೇಕಂದ್ರೆ ಜೂನ್ ನಲ್ಲಿ ನಡೆಸುತ್ತೇವೆ ಎಂದರು.