ಮಂಗಳೂರು : ಅಬ್ದುಲ್ ರೆಹಮಾನ್ ಕೊಲೆ ಆರೋಪಿಗಳ ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಪ್ರಯೋಗಿಸಿರುವುದನ್ನು ವಿರೋಧಿಸಿ ವಿ.ಎಚ್.ಪಿ. ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಪದ್ಮರಾಜ್ ಆರ್. ಪೂಜಾರಿ, ದೇಶದಲ್ಲಿ ಸಂವಿಧಾನ ಹಾಗೂ ಕಾನೂನಿನ ಆಡಳಿತವಿದೆ.
ಕಾನೂನು ತನ್ನದೇ ಆದ ಹಾದಿಯಲ್ಲಿ ನಿಯಮಾನುಸಾರ ಕೆಲಸ ಮಾಡುತ್ತದೆ. ಯಾರೇ ಆಗಲಿ ಸಂವಿಧಾನ ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಅದನ್ನು ತಡೆಯಲು ಸಂಬಂಧಪಟ್ಟ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತದೆ. ಇಲಾಖೆಯ ಕಾರ್ಯವೈಖರಿಯಲ್ಲಿ ಕಾಂಗ್ರೆಸ್ ಹಸ್ತಕ್ಷೇಪವಿಲ್ಲ ಎಂದರು.

