ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಮಂಗಳೂರಿನ ಪಚ್ಚನಾಡಿಯಲ್ಲಿ ಸೆರೆಯಾಗಿದ್ದಾನೆ.
ಬಂಧನವನ್ನು ಎಸ್ಪಿ ಅರುಣ್ ಕುಮಾರ್ ಖಚಿತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಚೇತನ್ ವಿಷ ಸೇವಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ.
ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲು ಮಾಡಲಾಗಿದೆ. ವಿವಿಧ ಸೆಕ್ಷನ್ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮಾಧ್ಯಮಕ್ಕೆ ಎಸ್ಪಿ ಅರುಣ್ ಕುಮಾರ್ ಮಾಹಿತಿ ನೀಡಿದರು.

