ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹವು ನಗರದ ಹೃದಯ ಭಾಗದಲ್ಲಿದೆ. ಜೈಲನ್ನು ನಗರದಿಂದ ಬೇರೆ ಕಡೆಗೆ ಸ್ಥಳಾಂತರಿಸುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕಿನ ಬಾಳೆಪುಣಿಯಲ್ಲಿ 70 ಎಕರೆ ಜಾಗವನ್ನು ಕಾಯ್ದಿರಿಸಲಾಗಿದ್ದು, ಇಲ್ಲಿ ನೂತನ ಕಾರಾಗೃಹದ ಕಟ್ಟಡವೂ 110 ಕೋಟಿ ರೂಪಾಯಿ ಮೊತ್ತದಲ್ಲಿ ಸಜ್ಜಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಜೈಲನ್ನು ತಕ್ಷಣ ಅಲ್ಲಿಗೆ ಸ್ಥಳಾಂತರಿಸಬೇಕೆಂದು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇನೆ.‌ ಗೃಹಸಚಿವ ಜಿ.ಪರಮೇಶ್ವರ ಅವರು ಇದಕ್ಕೆ ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ. ಎಂದು ಅವರು ತಿಳಿಸಿದರು.

ಬಾಳೆಪುಣಿಯ ಕಾರಾಗೃಹದ ಮೊದಲ ಹಂತದಲ್ಲಿ 110 ಕೋಟಿ ಮೊತ್ತದ ಕಾಮಗಾರಿ ಪೂರ್ಣಗೊಂಡಿದೆ . 2,11 ಕೋಟಿ ಮೊತ್ತದಲ್ಲಿ ಸುಸಜ್ಜಿತ ಆವರಣ ಗೋಡೆ ನಿರ್ಮಿಸಲಾಗಿದೆ.‌ ಜೈಲಿನೊಳಗೆ ಅಕ್ರಮ ಚಟುವಟಿಕೆ ತಡೆಯಲು ಬೇಕಾದ‌ ಸುಸಜ್ಜಿತ ಸೌಕರ್ಯಗಳೂ ಅಲ್ಲಿವೆ. ಇಲ್ಲಿ ನ ಸಿಬ್ಬಂದಿಯ ವಸತಿಗೃಹ ಇನ್ನುಜ ನಿರ್ಮಾಣವಾಗಿಲ್ಲ.

ಇದಕ್ಕೆ ಪೀಠೋಪಕರಣಗಳು ಹಾಗೂ ಸಿಬ್ಬಂದಿಯ ವಸತಿ ಗೃಹಗಳ ನಿರ್ಮಾಣ ಇನ್ನಷ್ಟೇ ಆಗಬೇಕಿದೆ ಎಂದು ಅವರು ತಿಳಿಸಿದರು. ಜಾನುವಾರು ಅಕ್ರಮ ಸಾಗಾಟ ತಪ್ಪು. ಇಂತಹ ಪ್ರಕರಣ ಕಂಡುಬಂದರೆ ಪೊಲೀಸರ ಗಮಕ್ಕೆ ತರಬೇಕು. ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಇಂತಹ ಪ್ರಕರಣಗಳಲ್ಲಿ ಪೊಲೀಸರು ಸಮರ್ಪಕವಾಗಿ ಕ್ರಮ ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.