ದಕ್ಷಿಣ ಕನ್ನಡ : ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ.

ಎಸ್​ಐಟಿ ಅಧಿಕಾರಿಗಳು ಮಾಸ್ಕ್​​​ಮ್ಯಾನ್​​ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ.

ಹೆಚ್ಚಿನ ಮಾಹಿತಿ ಎಸ್‌ಐಟಿಯಿಂದ ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದರು. ಎಸ್‌ಐಟಿ ತನಿಖೆಯ ಮುಕ್ತಾಯ ಆಗುತ್ತಾ ಅಂತ ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ ಮಂಪರು ಪರೀಕ್ಷೆ ಮಾಡಬೇಕಾ? ಬೇಡವಾ ಅನ್ನೋದು ಎಸ್‌ಐಟಿ ನಿರ್ಧಾರ ಮಾಡುತ್ತೆ.

ಅಲ್ಲದೇ ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್‌ಐಟಿ ತನಿಖೆಗೆ ಅಡ್ಡಿಯಾಗುತ್ತದೆ. ಯಾವುದನ್ನೂ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಸದ್ಯ ಆತ ಎಸ್​​ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.