Bengaluru 15°C

ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ: ಡಾ.ಮೋಹನ್ ಆಳ್ವ

ಸಮಾಜ ಕಟ್ಟುವಲ್ಲಿ ಪಾತ್ರ ಮುಖ್ಯ, ಮಾಧ್ಯಮ ಜೀವನದ ಅವಿಭಾಜ್ಯ ಅಂಗವಾಗಿದೆ, ಶಿಕ್ಷಣ, ಮಾಹಿತಿ ವಿತರಣೆ ಸಾಮಾಜಿಕ ಜಾಗೃತಿ ಮೂಡಿಸುವ ಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ತಿಳಿಸಿದ್ದಾರೆ.

ಮಂಗಳೂರು: ಸಮಾಜ ಕಟ್ಟುವಲ್ಲಿ ಪಾತ್ರ ಮುಖ್ಯ, ಮಾಧ್ಯಮ ಜೀವನದ ಅವಿಭಾಜ್ಯ ಅಂಗವಾಗಿದೆ, ಶಿಕ್ಷಣ, ಮಾಹಿತಿ ವಿತರಣೆ ಸಾಮಾಜಿಕ ಜಾಗೃತಿ ಮೂಡಿಸುವ ಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ತಿಳಿಸಿದ್ದಾರೆ.


ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ 5ನೇ ಜಿಲ್ಲಾ ಸಮ್ಮೇಳನವನ್ನು ಗುರುವಾರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.


ಮಾಧ್ಯಮಗಳು ಸಮಾಜದ ದುರ್ಬಲರಿಗೆ ಅಶಕ್ತರಿಗೆ ಶಕ್ತಿ ನೀಡಿದೆ. ಮಾಧ್ಯಮದ ಅತೀರಂಜಿತ ಸುದ್ದಿ, ಸತ್ಯ ನೈತಿಕತೆಯ ಮರೆತ ಸುಳ್ಳು ಸುದ್ದಿ, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜದ ನೈತಿಕತೆಯನ್ನು ಅಪಹಾಸ್ಯ ಮಾಡುವಂತಿದೆ. ಮಾಧ್ಯಮಗಳ ಸಂಶೋಧನೆ, ಆಳವಾದ ಚಿಂತನೆಯ ಮೂಲಕ ಸಮಾಜವನ್ನು ಇನ್ನಷ್ಟು ಬಲಿಷ್ಠ ವಾಗಿ ಕಟ್ಟುವ ಅಗತ್ಯವಿದೆ ಎಂದರು.


ಸಮ್ಮೇಳನದ ಸರ್ವಾಧ್ಯಕ್ಷ ಶಿವಸುಬ್ರಹ್ಮಣ್ಯ ಮಾತನಾಡುತ್ತಾ,ಇತ್ತೀಚಿನ ಡಿಜಿಟಲ್ ಕ್ರಾಂತಿಯಿಂದ ಪತ್ರಕರ್ತರು ನಲುಗಿದ್ದಾರೆ. ಈ ಕ್ರಾಂತಿ ಆತಂಕವನ್ನು ಸೃಷ್ಟಿಸಿದೆ. ತಾನು ಆರಂಭದಲ್ಲಿ ಮುಂಗಾರು ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ ಎಂದರು.


ಎಂಆರ್ ಪಿಎಲ್ ನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಹಸಿರೇ ಉಸಿರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಸಮಾಜದ ಒಳಿತಿಗಾಗಿ,ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಪತ್ರಕರ್ತರ ಮಹತ್ವದ ಪಾತ್ರವಿದೆ. ಪತ್ರಕರ್ತರು ಸಮಾಜದ ಕಣ್ಣು ಕಿವಿಗಳಂತೆ ಇರುವವರು ಸಮಾಜ, ಮಾಧ್ಯಮದ ತಪ್ಪುಗಳನ್ನು ಸರಿಪಡಿಸಲು ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ ಎಂದರು. ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡುತ್ತಾ, ಪತ್ರಕರ್ತರು ಸಮರ್ಪ ಕವಾಗಿ ಕಾರ್ಯ ನಿರ್ವಹಿಸಲು ವಾತಾವರಣ ನಿರ್ಮಾಣ ಮಾಡು ವಂತಾಗಬೇಕು ಎಂದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಶುಭ ಹಾರೈಸಿದರು.


ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಾಧಕರನ್ನು ಸನ್ಮಾನಿಸಿ ಮಾತನಾಡುತ್ತಾ, ಹಿಂದೆ ಮಾಹಿತಿಗಾಗಿ ಪತ್ರಿಕೆ ಯನ್ನು ಕಾದು ಕುಳಿತು ಓದುತ್ತಿದ್ದರು. ಆದರೆ ಮೂರು ದಶಕಗಳ ಬಳಿಕ ಸುದ್ದಿ ಮನೆಯಲ್ಲಿ ಬದಲಾವಣೆಯಾಗಿದೆ. ತಂತ್ರಜ್ಞಾನದಲ್ಲಿಯೂ ಬದಲಾವಣೆಯಾಗಿದೆ.ಕನ್ನಡದ ಮೊದಲ ಪತ್ರಿಕೆ ಮಂಗಳೂರಿನಿಂದ ಆರಂಭ ವಾಗಿದೆ ಎಂದರು.


ಪತ್ರಕರ್ತರು ಸಾಮಾಜಿಕವಾಗಿ ಸ್ಪಂದನೆ ಯೊಂದಿಗೆ ಮಾನವೀಯತೆಯೊಂದಿಗೆ ಸೂಕ್ಷ್ಮ ಸಂವೇದನೆಯೊಂದಿಗೆ ಕಾರ್ಯ ನಿರ್ವಹಿಸ ಬೇಕಾಗುತ್ತದೆ.ಮಾಧ್ಯಮ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸಬೇಕಾಗಿದೆ ಎಂದರು. ಸಮಾರಂಭದ ವೇದಿಕೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ರಕರ್ತ ದಿ. ವೀರೇಶ್ ಸ್ಮರಣಾರ್ಥಛಾಯಾಚಿತ್ರ ಪ್ರದರ್ಶನ,ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಮನಪಾ ಉಪ ಆಯುಕ್ತ ಚಂದ್ರಶೇಖರ್ , ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯದರ್ಶಿ ಆರಿಫ್ ಪಡುಬಿದ್ರೆ ಮೊದಲಾದವರು ಉಪಸ್ಥಿತರಿದ್ದರು.


ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸ್ವಾಗತಿಸಿ ದರು.ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ದಿನೇಶ್ ಇರಾ ಕಾರ್ಯಕ್ರಮ ನಿರೂಪಿ ಸಿದರು. ಸತೀಶ್ ಇರಾ, ದಿನೇಶ್ ತಂಡದ ವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆರ್ ಸಿ.ಭಟ್ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕುತ್ಲೂರು ಶಾಲಾ ವಿದ್ಯಾರ್ಥಿ ಗಳಿಗೆ ಹಾಗೂ ಹರಿಹರ ಶಾಲಾ ವಿದ್ಯಾರ್ಥಿ ಗಳಿಗೆ ಸಮವಸ್ತ್ರ ವಿತರಿಸಲಾಯಿತು.


Nk Channel Final 21 09 2023