ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿರುತ್ತಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖಾಸಗಿ ಬಸ್ಸಿನಲ್ಲಿ ಪಾರ್ಸೆಲ್ ಮೂಲಕ ಸಾಗಾಟ ಮಾಡಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಇನ್ನೋವಾ ಕಾರಿನಲ್ಲಿ ಮುಕ್ಕ-ಮಾಲೆಮಾರ್ ಬೀಚ್  ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಏ10 ರಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇನ್ನೋವಾ ಕಾರನ್ನು ಪತ್ತೆ ಹಚ್ಚಿದರು.

ಮೊಹಮ್ಮದ್ ಆಸೀಫ್(24), ತಂದೆ: ರಜಾಕ್, ಸಂಕೇಶ ಹೌಸ್, ಕಿನ್ಯಾ, ದೇರಳಕಟ್ಟೆ, ಮಂಗಳೂರು. ಹಾಲಿ ವಾಸ: 4ನೇ ಬ್ಲಾಕ್, ಬದ್ರಿಯಾ ಮಸೀದಿ ಹತ್ತಿರ, ಕೃಷ್ಣಾಪುರ, ಸುರತ್ಕಲ್, ಮಂಗಳೂರು. ಅಸ್ಗರ್ ಆಲಿ(31), ತಂದೆ: ಸಿದ್ದಿಕ್, ಸಸಿಹಿತ್ಲು ರೋಡ್, ಕಸ್ತೂರಿ ಮಿಲ್ ನ ಹತ್ತಿರ, ಮುಕ್ಕ, ಸುರತ್ಕಲ್, ಮಂಗಳೂರು. ಮೊಹಮ್ಮದ್ ರಶೀಮ್(24), ತಂದೆ: ಮೊಹಮ್ಮದ್ ಹನೀಫ್, 6ನೇ ಬ್ಲಾಕ್, ಕೃಷ್ಣಾಪುರ, ಸುರತ್ಕಲ್, ಮಂಗಳೂರು. ಹಾಲಿ ವಾಸ: ಮೆಹರನ್ ಹೌಸ್, ಆಸರೆ ಹೌಸ್ ಹತ್ತಿರ, ಹಳೆಯಂಗಡಿ, ಸಾಗ್, ಮಂಗಳೂರು. ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ. 1 ಲಕ್ಷ ಮೌಲ್ಯದ 10 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ ರೂ. 4000/-, 4 ಮೊಬೈಲ್ ಫೋನ್ ಗಳು, KA-31-N-6311  ಟೊಯೊಟಾ ಇನ್ನೋವಾ ಕಾರು ಸಹಿತ ಒಟ್ಟು ರೂ. 9,24,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ  ಸುರತ್ಕಲ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಬಸ್ ನಲ್ಲಿ ಪಾರ್ಸೆಲ್ ಮೂಲಕ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಆರೋಪಿಗಳು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಸೀಫ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು 2 ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ  ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು.