Bengaluru 22°C
Ad

ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು

ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ ನಲ್ಲಿ ನಡೆದಿದೆ.

ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ ನಲ್ಲಿ ನಡೆದಿದೆ.

Ad

ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜುತ್ತಿದ್ದ ಮೈಸೂರು ಮೂಲದ ಮೂವರ ದುರ್ಮರಣ ಹೊಂದಿದ್ದಾರೆ. ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತ ಯುವತಿಯರು.

Ad

D

ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಮೂವರು ಕೊಠಡಿ ಪಡೆದಿದ್ದರು. ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು. ಮೂವರೇ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Ad

ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತ್ತು.ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದೆ. ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿರೋ ಅನುಮಾನ ಕಂಡು ಬಂದಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

Ad
Ad
Ad
Nk Channel Final 21 09 2023