Ad

ಇಂದು ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Leave

ಮಂಗಳೂರು: ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರ ಇಂದು ರಜೆ ಘೋಷಿಸಲಾಗಿದೆ.

Ad
300x250 2

ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಂಗಳೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಂಗಳೂರು ತಹಶೀಲ್ದಾರ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಜುಲೈ 11ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿತ್ತು.

1276138 Whatsapp Image 2024 07 07 At 111731 Pm

Ad
Ad
Nk Channel Final 21 09 2023
Ad