ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿರುವ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳನ್ನು ತಂದೆ ಮಜೀದ್ ಪಾರು ಮಾಡಿದ್ದಾರೆ.
ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿ ಗೊಳಗಾಗಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದಿದೆ. ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ.

