ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಲಿಮಿಟೆಡ್ ವತಿಯಿಂದ ಮಂಗಳೂರು ನಗರ ಪೊಲೀಸ್ ಇಲಾಖೆಗೆ ಎರಡು ಸ್ಕಾರ್ಪಿಯೋ ವಾಹನಗಳ ಹಸ್ತಾಂತರ ಕಾರ್ಯಕ್ರಮವು ನಗರದ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾರಿನ ಕೀಯನ್ನು ನಬರ್ಡ್ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಸುರೇಂದ್ರ ಬಾಬು ಅವರು ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಬ್ಯಾಂಕ್ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.ಗ್ರಾಹಕರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ಪೊಲೀಸ್ ಇಲಾಖೆಗೆ ಅತೀ ಮುಖ್ಯವಾಗಿ ವಾಹನ ಅಗತ್ಯವಿದೆ. ಪೊಲೀಸರ ನಿರಂತರ ಕರ್ತವ್ಯಕ್ಕೆ ಅತೀ ಮುಖ್ಯವಾಗಿದೆ.ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕರ್ತವ್ಯವನ್ನು ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ವಹಿಸಿ,ಮಾತನಾಡಿದ್ರೂ, ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕ್ ನ ತವರೂರು.ಇಲ್ಲಿನ ಬ್ಯಾಂಕ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಾ ಬರುತ್ತಿದೆ. ಜನರೊಂದಿಗೆ ಉತ್ರಮ ಬಾಂಧವ್ಯವನ್ನ ಹೊಂದಿದೆ ಎಂದು ಹೇಳಿದರು.
ಈ ವೇಳೆ ಉಪಾಧ್ಯಕ್ಷರಾದ ವಿನಯ ಕುಮಾರ್ ಸೊರಕೆ, ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲಕೃಷ್ಣ ಭಟ್.ಕೆ ಮೊದಲಾದವರು ಉಪಸ್ಥಿತರಿದ್ದರು.

