ಉಳ್ಳಾಲ : ಬೀದಿಬದಿ ವ್ಯಾಪಾರಿಗಳ ಮೇಲೆ ಲೋಕೋಪಯೋಗಿ ಮತ್ತು ಹೆದ್ದಾರಿ ಪ್ರಾಧಿಕಾರ ನಡೆಸುತ್ತಿರುವ ದೌರ್ಜನ್ಯವನ್ನು ಸಮಗ್ರವಾಗಿ ಎದುರಿಸಲು ಫೆಬ್ರವರಿ 17 ರಂದು ಬೆಳಿಗ್ಗೆ 10ಗಂಟೆಗೆ ಕುತ್ತಾರಿನಲ್ಲಿರುವ ಮುನ್ನೂರು ಯುವಕ ಮಂಡಲದ ಸಭಾಭವನದಲ್ಲಿ ಉಳ್ಳಾಲ ತಾಲೂಕು ಮಟ್ಟದ ಬೀದಿಬದಿ ವ್ಯಾಪಾರಸ್ಥರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

ಆ ಸಮಾವೇಶದಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ, ಐಡಿ ಕಾರ್ಡ್, ಪ್ರಮಾಣ ಪತ್ರ, ಪಿ ಎಂ ಸ್ವನಿಧಿ ಸಾಲ, ತರಬೇತಿ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ತಿಳಿಸಿದರು.