ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕ ಹಾಗೂ ದಬ್ಬಾಳಿಕೆಯನ್ನು ವಿರೋಧಿಸಿ, ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ (ರಿ.), ಮಂಗಳೂರು ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ (ರಿ.) ಮತ್ತು ಉಭಯ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಈ ಧರಣಿಗೆ ಸಂಬಂಧಿಸಿದಂತೆ ಮಾಜಿ ಉಡುಪಿ ಶಾಸಕ ರಘುಪತಿ ಭಟ್ ಅವರು ಮಾತನಾಡಿದರು.