Ad

ಮಂಗಳೂರು: ಜುಲೈ 13 ರಂದು ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌, ಪತ್ರಿಕಾಭವನ ಟ್ರಸ್ಟ್‌ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಜು.13ರಂದು ಬೆಳಗ್ಗೆ 9ಗಂಟೆಗೆ ಕದ್ರಿ ಪಾರ್ಕ್‌ ನಲ್ಲಿ ನಡೆಯಲಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ಕ್ಲಬ್‌, ಪತ್ರಿಕಾಭವನ ಟ್ರಸ್ಟ್‌ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಜು.13ರಂದು ಬೆಳಗ್ಗೆ 9ಗಂಟೆಗೆ ಕದ್ರಿ ಪಾರ್ಕ್‌ ನಲ್ಲಿ ನಡೆಯಲಿದೆ.

Ad
300x250 2

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಉದ್ಘಾಟಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ್‌ ಗಿಡ ವಿತರಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು.

ಮಂಗಳೂರು ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಳನ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಟೋನಿ ಮರಿಯಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‌, ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ್‌ ಭಾಗವಹಿಸುವರು. ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad