ಮಂಗಳೂರು : ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
Ad
ಫಳ್ನೀರ್ ಬಳಿಯ ಚಿನ್ನಾಭರಣಗಳ ಮಳಿಗೆಯ ಬಳಿಯ ಮುಂದೆ ನಿಲ್ಲಿಸಲಾಗಿದ್ದ ಮಹೇಂದ್ರ ಬೊಲೆರೊ ವಾಹನ ಬೆಂಕಿಗೆ ಸುಟ್ಟು ಕರಕಲಾಗಿದೆ. ತಕ್ಷಣ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.
Ad
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ವಾಹನಕ್ಕೆ ಬೆಂಕಿ ತಗಲಿದೆ ಎಂದು ತಿಳಿದು ಬಂದಿದೆ. ಈ ವಾಹನ ಚಿನ್ನಾಭರಣಗಳ ಸಂಸ್ಥೆಗೆ ಸೇರಿದೆ ಎಂದು ಗೊತ್ತಾಗಿದೆ. ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Ad
Ad