Bengaluru 26°C
Ad

ಉಪ‌ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ: ಕಿಶೋರ್ ಕುಮಾರ್

ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪ‌ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

ಪುತ್ತೂರು: ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪ‌ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

Ad

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಬಂಗಾರು ಹನುಮಂತ ಅವರ ಪರವಾಗಿ ವಡ್ಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರಕಾರವು ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಿವಾದಗಳೇ ಬಂಡವಾಳವಾಗಿದೆ ಹೊರತು ಜನರ ಸಂಕಷ್ಟ ಕೇಳುವವರಿಲ್ಲದಂತಾಗಿದೆ. ಗ್ಯಾರಂಟಿ ಯೋಜನೆಗಳು ಮೂಲೆ ಸೇರುತ್ತಿರುವಂತೆ ರಾಜ್ಯ ಸರಕಾರವೂ ಕೂಡ ಮೂಲೆ ಗುಂಪಾಗುವ ದಿನ ದೂರವಿಲ್ಲ ಎಂದು ಹೇಳಿದರು.

Ad

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಶತ‌ ಸಿದ್ಧ. ಕಾಂಗ್ರೆಸಿನ ಷಡ್ಯಂತ್ರಗಳಿಗೆ ಮತದಾರ ಮರುಳಾಗದೆ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ಕುರಿತು ಕ್ಷೇತ್ರದ ಜನರಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗುತಿದ್ದು ಬಿಜೆಪಿ ಗೆಲುವಿನ ನಗೆ ಬೀರಲಿದೆ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad
Ad
Ad
Nk Channel Final 21 09 2023