ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಲಾರಿ ಚಾಲಕ ಚಾಲಕ ಸುಜಿತ್ ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಅಕ್ಕಿ ಲೋಡ್ ಲಾರಿ ಬಂಟ್ವಾಳದ ಎಸ್ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ .
ಅಕ್ಕಿ ಲೋಡ್ ನ ಮೇಲೆ ಅಂದರೆ ಲಾರಿಯ ಹಿಂಬಾಗದಲ್ಲಿ ಕುಳಿತುಕೊಂಡಿದ್ದ ಕಾರ್ಮಿಕ ಲಾರಿಪಲ್ಟಿಯಾದ ವೇಳೆ ರಸ್ತೆಗೆ ಎಸೆಯಲ್ಟಟ್ಟು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

