ಬಂಟ್ವಾಳ: ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾ| ಪಾಣೆಮಂಗಳೂರಲ್ಲಿ ನಡೆದಿದೆ. ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟ ದೃಶ್ಯವು ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ. ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದ ಆಟೋ ಹಾಗು ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

