ಬಜಪೆ : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬಜಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.
ಆನಂದ್ ಪೂಜಾರಿ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬಾನುವಾರ ಸಂಜೆ ಕಾಯರಾಣೆಯಲ್ಲಿ ಕ್ರಿಕೆಟ್ ಆಡುತ್ತಿರುವ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು.
ಅಲ್ಲಿ ಆನಂದ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

