ಹುಬ್ಬಳ್ಳಿ: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರ ಕುಮ್ಮಕ್ಕಿನಿಂದ ಹತ್ಯೆಗೀಡಾದ ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ಪ್ರತಿಭಟನೆ ನಡೆಸಿದು, ಬೃಹತ್ ಪ್ರತಿಭಟನಾ ರ್ಯಾಲಿಯೂ ನಗರದ ಕೊಪ್ಪಿಕರ ರಸ್ತೆಯ ಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರೇಣುಕಾಸ್ವಾಮಿ ಕೊಲೆ ಖಂಡಿಸಿ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ನ್ಯಾಯ ದೊರಬೇಕೆಂದು ಘೋಷಣೆ ಕೂಗುತ್ತಿದ್ದಾರೆ.

Image: Web
