Bengaluru 29°C
Ad

ಇಂದಿನಿಂದ ರಾಜ್ಯಕ್ಕೆ ಮುಂಗಾರು ಆಗಮನ : 1 ವಾರ ಭಾರೀ ಮಳೆ ಸಾಧ್ಯತೆ

ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರವಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಇವತ್ತು ಕರ್ನಾಟಕ ಗಡಿಗೆ ನೈತ್ಯ ಮಾನ್ಸೂನ್ ಪ್ರವೇಶ ಮಾಡಿದೆ.

ಬೆಂಗಳೂರು : ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರವಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಇವತ್ತು ಕರ್ನಾಟಕ ಗಡಿಗೆ ನೈತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಾನ್ಸೂನ್ ಪ್ರವೇಶವಾಗಲಿದೆ. ಹೀಗಾಗಿ ಇವತ್ತಿನಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನಲ್ಲೂ ಜೂನ್ 4 – 5 ರಿಂದ ಭಾರೀ ಮಳೆ ಸಾಧ್ಯತೆ ಇದ್ದು, ಜೂನ್ 7 ರಂದು ಇಡೀ ರಾಜ್ಯಾದ್ಯಂತ ಮುಂಗಾರು ಮಳೆ ವ್ಯಾಪಿಸಲಿದೆ. ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ 30-40 ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ಇನ್ನು ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿದೆ. 40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ.

Ad
Ad
Nk Channel Final 21 09 2023
Ad