News Karnataka Kannada
Saturday, April 20 2024
Cricket
ಮೈಸೂರು

ಅರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗೆ ಡಿಸಿ ಖಡಕ್‌ ವಾರ್ನಿಂಗ್‌

Photo Credit :

ಅರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗೆ ಡಿಸಿ ಖಡಕ್‌ ವಾರ್ನಿಂಗ್‌

ಮೈಸೂರು: ಕೋವಿಡ್-19 ಸೋಂಕು ತಡೆಗಟ್ಟುವ ಕಾರ್ಯದಲ್ಲಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧೆಡೆ ಆರೋಗ್ಯ ಇಲಾಖೆ ವತಿಯಿಂದ ಕೈಗೊಂಡಿರುವ ಸೋಂಕು ಪರೀಕ್ಷೆ ಕಾರ್ಯದಲ್ಲಿ ಕೆಲವು ಸಾರ್ವಜನಿಕರು ಅನಗತ್ಯವಾಗಿ ವೈದ್ಯರ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಇದು ಅತ್ಯಂತ ಗಂಭೀರ ಸ್ವರೂಪದಾಗಿರುವುದರಿಂದ ಇಂತಹ ಪ್ರಕರಣದಲ್ಲಿ ಭಾಗಿ ಆಗುವವರ ವಿರುದ್ಧ ತೀವ್ರ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿರುವ ಅವರು ಸೋಂಕಿನ ವಿರುದ್ದ ಹೋರಾಟದಲ್ಲಿ ಎಲ್ಲರೂ ಕೊರೋನ ವಾರಿಯರ್ಸ್‌ ಗಳೊಂದಿಗೆ ಸಹಕರಿಸಬೇಕು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು