News Karnataka Kannada
Sunday, April 14 2024
Cricket
ಮೈಸೂರು

ಆರ್ಥಿಕ ಸಹಾಯ ನೀಡಲು ಸ್ಪಂದನ ಕಾರ್ಯಕ್ರಮದಡಿ ಯೋಜನೆ: ಸೋಮಶೇಖರ್

Photo Credit :

ಆರ್ಥಿಕ ಸಹಾಯ ನೀಡಲು ಸ್ಪಂದನ ಕಾರ್ಯಕ್ರಮದಡಿ ಯೋಜನೆ: ಸೋಮಶೇಖರ್

ಮೈಸೂರು: ವಿವಿಧ ಸಹಕಾರ ಕ್ಷೇತ್ರಗಳ ಮೈಸೂರು ವಿಭಾಗದ ಸುಮಾರು 8600 ಕೋಟಿ ರೂ. ಸಾಲ ನೀಡಲು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಯೋಜನೆ ರೂಪಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಕಲಾಮಂದಿರದಲ್ಲಿ ಹಮ್ಮಿಕೊಂಡ ಮೈಸೂರು ವಿಭಾಗೀಯ ಮಟ್ಟದ ಆರ್ಥಿಕ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೋವಿಡ್ 19 ರ ಸಂದರ್ಭದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಮಾಡಬೇಕು ಎಂಬುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ. ಈಗಾಗಲೇ ಬೆಂಗಳೂರು ವಿಭಾಗಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಆತ್ಮನಿರ್ಭರ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಯಡಿ 39300 ಕೋಟಿ ರೂ. ಹಣವನ್ನು ಆರ್ಥಿಕ ಸ್ಪಂದನದ ಮೂಲಕ ರೈತರು, ವ್ಯಾಪಾರಸ್ಥರು, ಸ್ವಸಹಾಯ ಸಂಘಗಳು, ಹಾಲು ಉತ್ಪಾದಕ ಸಂಘಗಳು, ಸಣ್ಣ – ದೊಡ್ಡ ಉದ್ದಿಮೆಗಳಿಗೆ ಸಾಲ ನೀಡಲಾಗುತ್ತಿದೆ. ಇದೊಂದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ನಾವು ಕೊಟ್ಟ ಸಾಲವನ್ನು ಯಾವ ರೀತಿ ಸದ್ಬಳಕೆಯಾಗುತ್ತದೆ ಎಂಬ ಬಗ್ಗೆ ಗಮನಹರಿಸುತ್ತೇವೆ. ಯಾವುದೇ ಕಾರಣಕ್ಕೂ ಸಾಲ ದುರ್ಬಳಕೆಯಾಗಕೂಡದು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಾಲವನ್ನು ಎಲ್ಲರೂ ಪ್ರಾಮಾಣಿಕವಾಗಿ ಬಳಸಿ, ಮರುಪಾವತಿ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿ ಎಂದು ತಿಳಿಸಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಕೋವಿಡ್ 19ರ ಸಂದರ್ಭದಲ್ಲಿ ರಾಜ್ಯ ಪ್ರವಾಸ ಮಾಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಲಾಖೆ ವ್ಯಾಪ್ತಿಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತಂದಿದ್ದಾರೆ. ಕೋವಿಡ್ ನಿರ್ವಹಣೆಗೋಸ್ಕರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂಪಾಯಿ ದೇಣಿಗೆಯನ್ನು ಸಹಕಾರಿಗಳಿಂದ ಸಂಗ್ರಹಿಸಿ ಕೊಟ್ಟಿದ್ದಾರೆ. ಈಗ ಸಂಕಷ್ಟದಲ್ಲಿರುವ ಎಲ್ಲ ತರಹದ ರೈತರಿಗೆ, ಕೂಲಿಕಾರ್ಮಿಕರಿಗೆ, ವ್ಯಾಪಾರಸ್ಥರಿಗೆ ಸಾಲ ನೀಡುವ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದೊಂದು ಉತ್ತಮ ಕಾರ್ಯಕ್ರಮ ಎಂದು ಹೇಳಿದರು.

ಶಾಸಕ ಎಸ್.ಎ. ರಾಮದಾಸ್ ಮಾತನಾಡಿ, ಪಟ್ಟಣ, ಗ್ರಾಮೀಣ ಭಾಗಗಳ ಜನತೆಗೆ ಆರ್ಥಿಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಸಾಲ ನೀಡುವ ಸಲುವಾಗಿ ಆತ್ಮನಿರ್ಭರ ಭಾರತ ಯೋಜನೆ ಸಹಕಾರಿಯಾಗಿದೆ. ಇದರ ಮೂಲಕ ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು