News Karnataka Kannada
Wednesday, April 17 2024
Cricket
ಮೈಸೂರು

ಈ ಬಾರಿ ಅರಮನೆಯ ದಸರಾಗೆ ಸಾರ್ವಜನಿಕರು, ಮಾಧ್ಯಮಗಳಿಗೆ ನಿರ್ಬಂಧ

Photo Credit :

ಈ ಬಾರಿ ಅರಮನೆಯ ದಸರಾಗೆ ಸಾರ್ವಜನಿಕರು, ಮಾಧ್ಯಮಗಳಿಗೆ ನಿರ್ಬಂಧ

ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ 2020ರ ಸಾಲಿನ ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅರಮನೆಯ ದರ್ಬಾರ್ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಅಲ್ಲದೇ ಖಾಸಗಿ ದರ್ಬಾರ್ ವೀಕ್ಷಣೆ ಹಾಗೂ ನೇರ ಪ್ರಸಾರಕ್ಕೂ ಅವಕಾಶ ಇಲ್ಲದಂತಾಗಿದೆ.

ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ಅರಮನೆಯಲ್ಲಿ 2020ರ ಸಾಲಿನ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನ ಸಾಂಪ್ರದಾಯಿಕವಾಗಿ ನಡೆಸಲಾಗುವುದು. ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿರುವುದರಿಂದ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳು ಭಾಗವಹಿಸುವಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು